ಕಲ್ಯಾಣ ಕರ್ನಾಟಕ ಪ್ರವಾಹ ಪೀಡಿತ ಪ್ರದೇಶಗಳಿಗೆ ಸಿಎಂ ಭೇಟಿ

Praja vahini
1 Min Read


postviews: 8

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಭಾರಿ ಮಳೆ ಆಗುತ್ತಿದ್ದು, ಇದರಿಂದ ಹಲವಾರು ಅವಾಂತರಗಳು ಸೃಷ್ಟಿಯಾಗುತ್ತಿವೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಮಂಗಳವಾರ ಸೆಪ್ಟೆಂಬರ್ 30) ರಂದು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಲ್ಬುರ್ಗಿ ವಿಮಾನ‌ ನಿಲ್ದಾಣಕ್ಕೆ ಆಗಮಿಸಿ,  ಪ್ರವಾಹದಿಂದಾಗಿ ಭೀಮಾ ತೀರದ ಪ್ರದೇಶಗಳಲ್ಲಿ ಉಂಟಾಗಿರುವ ಹಾನಿ ಬಗ್ಗೆ ವಿಮಾನ‌ನಿಲ್ದಾಣದಲ್ಲೇ ಪ್ರಾಥಮಿಕ ಸಭೆ ನಡೆಸಿ ವಿವರವಾದ ಮಾಹಿತಿ ಪಡೆದರು.

ಕಲಬುರಗಿ, ಬೀದರ್, ಯಾದಗಿರಿ ಹಾಗು ವಿಜಯಪುರ ಜಿಲ್ಲಾ ಅಧಿಕಾರಿಗಳು ಮತ್ತು ಉಸ್ತುವಾರಿ ಕಾರ್ಯದರ್ಶಿಗಳು ಸಭೆಯಲ್ಲಿದ್ದು ವಿವರಗಳನ್ನು ನೀಡಿದರು. ಇದನ್ನೂ ಓದಿ: ಕಲ್ಯಾಣ ಕರ್ನಾಟಕಕ್ಕೆ ಸರ್ಕಾರದಿಂದ ರೈತರಿಗೆ ನ್ಯಾಯ ಸಿಗೋ ವಿಶ್ವಾಸ ಇಲ್ಲ: ಸಿಸಿ ಪಾಟೀಲ್

ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವರಾದ ಎಂ.ಬಿ‌.ಪಾಟೀಲ್, ಕೃಷ್ಣ ಬೈರೇಗೌಡ ಮತ್ತು ಪ್ರಿಯಾಂಕ್ ಖರ್ಗೆ ಅವರ ಜೊತೆಯಲ್ಲಿ ಮೊದಲ ಸುತ್ತಿನ‌ ವೈಮಾನಿಕ ಸಮೀಕ್ಷೆಗೆ ತೆರಳಿದರು. ಇದಾದ ಬಳಿಕ  ಬೀದರ್ ಜಿಲ್ಲಾ ವ್ಯಾಪ್ತಿಯಲ್ಲಿನ ಬೆಳೆ ಹಾನಿ ಕುರಿತು ಎರಡನೇ ಸುತ್ತಿನ ವೈಮಾನಿಕ ಸಮೀಕ್ಷೆಯನ್ನು ಮಧ್ಯಾಹ್ನ 2:30 ರ ಸುಮಾರಿಗೆ ಕೈಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.

source

Share This Article