postviews: 9
ಚಿಕ್ಕಮಗಳೂರು: ಬೆಳ್ಳಂ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಅಕ್ರಮ ಆಸ್ತಿಗಳಿಕೆ ಆರೋಪದ ಮೇಲೆ ಕಾಂಗ್ರೆಸ್ ನ ಶಾಸಕ ಟಿ ಡಿ ರಾಜೇಗೌಡ ಅವರ ಮನೆ ಮೇಲೆ ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಕೋರ್ಟ್ ನಿರ್ದೇಶನದಂತೆ ರಾಜೇಗೌಡ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್ ದಾಖಲಾಗಿತ್ತು. ಎಫ್ಐಆರ್ ದಾಖಲು ಬೆನ್ನಲ್ಲೇ ಲೋಕಾಯುಕ್ತ ತನಿಖೆ ಚುರುಕುಗೊಳಿಸಿದೆ.
ಶಾಸಕ ರಾಜೇಗೌಡ, ಪತ್ನಿ ಪುಷ್ಪ ಹಾಗೂ ಮಗನ ವಿರುದ್ಧ ಪ್ರಕರಣ ದಾಖಲಾಗಿದೆ. ಟಿ.ಡಿ.ರಾಜೇಗೌಡ 2 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಅಫಿಡೆವಿಟ್ನಲ್ಲಿ ಆಸ್ತಿ ಘೋಷಣೆ ಮಾಡದ ದೂರು ನೀಡಲಾಗಿತ್ತು. ಇದನ್ನೂ ಓದಿ: ರಾಜ್ಯ ಸರ್ಕಾರದಿಂದ ವಯೋಮಿತಿ ಸಡಿಲಿಕೆಯಲ್ಲಿ ಮಹತ್ವದ ನಿರ್ಧಾರ!
ಶಾಸಕರಾಗಿ ಅಕ್ರಮ ಆಸ್ತಿ ಸಂಪಾದನೆ ಮಾಡಿರುವ ಬಗ್ಗೆ ಬಿಜೆಪಿ ಮುಖಂಡ ದಿನೇಶ್ ಹೊಸೂರು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಜನಪ್ರತಿನಿಧಿಗಳ ನ್ಯಾಯಾಲಯದ ಸೂಚನೆ ಮೇರೆಗೆ ಚಿಕ್ಕಮಗಳೂರು ಲೋಕಾಯುಕ್ತ ಕಚೇರಿಯಲ್ಲಿ ಪ್ರಕರಣ ದಾಖಲಾಗಿತ್ತು.
ಎಫ್ಐಆರ್ ದಾಖಲಾದ ಬೆನ್ನಲ್ಲೇ ಚಿಕ್ಕಮಗಳೂರು ಲೋಕಾಯುಕ್ತ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

