ಕಾಂತಾರ ಚಾಪ್ಟರ್ 1 ಸಿನಿಮಾದ ಬಗ್ಗೆ ನಟಿ ರುಕ್ಮಿಣಿ ವಸಂತ್ ಹೇಳಿದ್ದೇನು?

Praja vahini
1 Min Read


postviews: 8

ಬೆಂಗಳೂರು: ಬಹುನಿರೀಕ್ಷಿತ ಕಾಂತಾರಾ ಚಾಪ್ಟರ್ 1 ಸಿನಿಮಾ ದೇಶದಾದ್ಯಂತ ನಿನ್ನೆ (ಗುರುವಾರ ಅಕ್ಟೋಬರ್ 2) ರಂದು ಬಿಡುಗಡೆಯಾಗಿದ್ದು ಗೆಲ್ಲಲೇ ಭರ್ಜರಿ ಪ್ರದರ್ಶನ ಕಾಣುತ್ತಿದೆ.

ಕಾಂತಾರ ಚಾಪ್ಟರ್ 1 ಸಿನಿಮಾವನ್ನು ನಟ ಹಾಗೂ ನಿರ್ದೇಶಕ ರಿಷಭ್‌ ಶೆಟ್ಟಿ ಅವರು ನಿರ್ದೇಶನ ಮಾಡಿದ್ದಾರೆ. ನಾಯಕಿಯಾಗಿ ನಟನೆ ಮಾಡಿರುವ ನಟಿ ರುಕ್ಮಿಣಿ ವಸಂತ್, ಭಾವನಾತ್ಮಕವಾಗಿ ಕೃತಜ್ಞತೆ ಸಲ್ಲಿಸಿದ್ದಾರೆ. ಈ ಚಿತ್ರದಲ್ಲಿ ಕೆಲಸ ಮಾಡಿದ್ದು ಸವಾಲು ಮಾತ್ರವಲ್ಲದೆ, ನನ್ನ ಜೀವನವನ್ನೇ ಬದಲಾಯಿಸಿದೆ ಎಂದು ಹೇಳಿದ್ದಾರೆ.

ಈ ಕುರಿತು ತಮ್ಮ instagram ಖಾತೆಯಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿರುವ ಅವರು, ‘ಒಂದು ವರ್ಷದ ಹಿಂದೆ, ಕನ್ನಡದ ಹೆಮ್ಮೆ ಎನಿಸಿರುವ ಕಾಂತಾರ: ಚಾಪ್ಟರ್ 1 ಚಿತ್ರತಂಡವನ್ನು ಸೇರುವ ಅವಕಾಶ ನನಗೆ ಸಿಕ್ಕಿತು. ಈ ಚಿತ್ರದಲ್ಲಿ ಕೆಲಸ ಮಾಡುವುದು ಒಂದು ದೊಡ್ಡ ಜವಾಬ್ದಾರಿಯೂ ಹೌದು, ಸಾಹಸವೂ ಹೌದು. ಈ ಚಿತ್ರ ನನ್ನ ಜೀವನವನ್ನೇ ಬದಲಾಯಿಸಿದೆ. ನಾನು ತುಂಬಾ ಕಲಿತಿದ್ದೇನೆ ಮತ್ತು ಅದಕ್ಕಾಗಿ ನಾನು ಬಹಳ ಕೃತಜ್ಞಳಾಗಿದ್ದೇನೆ’ ಎಂದಿದ್ದಾರೆ. ಇದನ್ನೂ ಓದಿ: ಇಂದು ವಿಶ್ವದಾದ್ಯಂತ ಕಾಂತಾರ ಚಾಪ್ಟರ್ 1 ಸಪ್ತ ಭಾಷೆಗಳಲ್ಲಿ ಬಿಡುಗಡೆ

‘ನಮ್ಮ ಚಿತ್ರದ ನಾಯಕರೂ, ನಿರ್ದೇಶಕರೂ ಆದ ರಿಷಭ್ ಸರ್ ಅವರಿಗೆ ನಾನು ತುಂಬಾ ಧನ್ಯವಾದಗಳು. ನಿಮ್ಮ ಕಠಿಣ ಪರಿಶ್ರಮ, ದಯೆ ಮತ್ತು ಛಲ ಈ ಚಿತ್ರವನ್ನು ತುಂಬಾ ವಿಶೇಷವಾಗಿಸಿದೆ. ನನ್ನನ್ನು ನಂಬಿದ್ದಕ್ಕೆ ಮತ್ತು ನಾನು ಬೆಳೆಯಲು ಸಹಾಯ ಮಾಡಿದ್ದಕ್ಕೆ ಧನ್ಯವಾದಗಳು!. ಹೊಂಬಾಳೆ ತಂಡ ನನ್ನನ್ನು ನಿಮ್ಮ ಕುಟುಂಬದಲ್ಲಿ ಒಬ್ಬಳನ್ನಾಗಿಸಿಕೊಂಡಿದ್ದೀರಿ. ನಿಮಗೆ ನಾನು ಸದಾ ಚಿರಋಣಿ. ವಿಜಯ್ ಸರ್, ಚಲುವೇಗೌಡ, ಆದರ್ಶ್ ಹಾಗೂ ಚಿತ್ರದ ಎಲ್ಲರಿಗೂ ತುಂಬಾ ಧನ್ಯವಾದಗಳು’ ಎಂದು ಬರೆದಿದ್ದಾರೆ.

source

Share This Article