ಕೈ ಸರ್ಕಾರ ಧಾರ್ಮಿಕ ಕ್ಷೇತ್ರಕ್ಕೆ ಧಕ್ಕೆ ಮಾಡುತ್ತಿದೆ: ನಿಖಿಲ್ ಕುಮಾರಸ್ವಾಮಿ

Praja vahini
1 Min Read


postviews: 6

ಬೆಂಗಳೂರು: ಧರ್ಮಸ್ಥಳ ಬುರುಡೆ ಪ್ರಕರಣ ಕೇವಲ ಕರ್ನಾಟಕ ರಾಜ್ಯ ಮಾತ್ರವಲ್ಲದೇ ಇಡಿ ದೇಶದಲ್ಲಿ ಭಾರಿ ಸದ್ದು ಮಾಡಿತ್ತು. ರಾಜ್ಯ ಸರ್ಕಾರವು ಕೂಡ ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ರಚನೆ ಮಾಡಿ ವಿಚಾರಣೆ ಕೂಡ ನಡೆಸಿತು. ಆದರೆ ಈ ವಿಚಾರಣೆಯಲ್ಲಿ ಯಾವುದೇ ರೀತಿ ಸರಿಯಾದ ಸಾಕ್ಷಿ ಸಿಗದ ಕಾರಣ ಎಸ್ಐಟಿ ತನಿಖೆಯನ್ನು ಕೂಡ ರಾಜ್ಯ ಸರ್ಕಾರ ನಿಲ್ಲಿಸಿತು.

ಇನ್ನು ಧರ್ಮಸ್ಥಳ ಕೇಸ್‌ಗೆ ಸಂಬಂಧಿಸಿದಂತೆ ಇದೀಗ ನಿಖಿಲ್ ಕುಮಾರಸ್ವಾಮಿಯವರು ಪ್ರತಿಕ್ರಿಯಿಸಿದ್ದು, ಧರ್ಮಸ್ಥಳ ಕೇಸ್‌ನಲ್ಲಿ ಸರ್ಕಾರ ತರಾತುರಿಯಲ್ಲಿ ಎಸ್‌ಐಟಿರಚನೆ ಮಾಡಿ ಧಾರ್ಮಿಕ ಕ್ಷೇತ್ರಕ್ಕೆ ಧಕ್ಕೆ ಮಾಡೋ ಕೆಲಸ ಮಾಡಿದೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಇದನ್ನೂ ಓದಿ: ಕರ್ನಾಟಕದ ಜನತೆಗೆ ಸಿಹಿ ಸುದ್ದಿ

ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳ ಎಂಬ ಧಾರ್ಮಿಕ ಕ್ಷೇತ್ರಕ್ಕೆ ಧಕ್ಕೆ ಮಾಡೋ ಕೆಲಸ ಈ ಸರ್ಕಾರ ಮಾಡಿದೆ. ಎಸ್‌ಐಟಿಯನ್ನ ತರಾತುರಿಯಲ್ಲಿ ಈ ಸರ್ಕಾರ ಮಾಡಿತು. ಎಸ್‌ಐಟಿ ತನಿಖೆ ಮಾಡಿದ್ರು. ಇವರಿಗೆ ಏನು ಸಿಕ್ತು? ಏನು ಸಿಕ್ಕಿಲ್ಲ ಎಂದು ವಾಗ್ದಾಳಿ ನಡೆಸಿದರು. ಧಾರ್ಮಿಕ ಕ್ಷೇತ್ರಕ್ಕೆ ಅಪಮಾನ ಮಾಡೋ ಕೆಲಸ ಮಾತ್ರ ಈ ಸರ್ಕಾರ ಮಾಡಿದೆ ಎಂದು ಹರಿಹಾಯ್ದರು.

source

Share This Article