ಗೋಡಾ ಹೈ-ಮೈದಾನ್ ಹೈ: ಬನ್ನಿ ಚುನಾವಣೆಯಲ್ಲಿ ರಾಜಕಾರಣ ಮಾಡೋಣ: ಸಿಎಂ

Praja vahini
1 Min Read

ಮೈಸೂರು: ದಸರಾ ಮತ್ತು ನಮ್ಮ ಸಾಂಸ್ಕೃತಿಕ ಹಿರಿಮೆಯ ಪರಿಚಯ ಇಲ್ಲದವರು ಬಾನು ಮುಷ್ತಾಕ್ ಅವರಿಗೆ ವಿರೋಧಿಸಿದ್ದರು. ಇತಿಹಾಸ ತಿರುಚಿ, ಸ್ವಾರ್ಥ ರಾಜಕೀಯ ಮಾಡುವುದು ಅಕ್ಷಮ್ಯ ಅಪರಾಧ. ರಾಜಕಾರಣ ಮಾಡುವುದಿದ್ದರೆ ಚುನಾವಣೆಯಲ್ಲಿ ಮಾಡೋಣ. ನಾಡ ಹಬ್ಬದ ವಿಚಾರದಲ್ಲಿ ಕೆಳ ಮಟ್ಟದ ರಾಜಕಾರಣ ಮಾಡುವುದು ಕ್ಷುಲ್ಲಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. 

ವಿಶ್ವವಿಖ್ಯಾತ ಮೈಸೂರು ದಸರಾ ಹಬ್ಬಕ್ಕೆ ಇಂದು (ಸೋಮವಾರ ಸೆ. 22)  ಚಾಲನೆ ನೀಡಿ ಮಾತನಾಡಿದ ಅವರು, ಗೋಡಾ ಹೈ-ಮೈದಾನ್ ಹೈ, ಬನ್ನಿ ಚುನಾವಣೆಯಲ್ಲಿ ರಾಜಕಾರಣ ಮಾಡೋಣ. ನಾಡ ಹಬ್ಬದ ವಿಚಾರದಲ್ಲಿ ಕೆಟ್ಟ ರಾಜಕಾರಣ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸವಾಲು ಎಸೆದರು. ಇದನ್ನೂ ಓದಿ: ಆರೋಗ್ಯಕರ ಪರಿಸರ ಒದಗಿಸುವುದು ನಮ್ಮ ಬದ್ಧತೆ: ಸತೀಶ್ ರೆಡ್ಡಿ

ನಾಡಿನ ಬಹುಸಂಖ್ಯಾತ ಸಮುದಾಯ ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟಿಸಿರುವುದನ್ನು ಸ್ವಾಗತಿಸಿದೆ. ಇದು ಹೆಮ್ಮೆಯ ಸಂಗತಿ. ಅಂತಾರಾಷ್ಡ್ರೀಯ ಬೂಕರ್ ಪ್ರಶಸ್ತಿ ಪುರಸ್ಕೃತರಾದ ಬಾನು ಮುಷ್ತಾಕ್ ಅವರು ದಸರಾ ಉದ್ಘಾಟಿಸಿರುವುದು ಸೂಕ್ತವಾಗಿದೆ. ಬಾನು ಮುಷ್ತಾಕ್ ಮುಸ್ಲಿಂ ಮಹಿಳೆ ಎನ್ನುವುದಕ್ಕಿಂತ ಮಾನವೀಯ ಮೌಲ್ಯ ಪಾಲಿಸುವ ಮನುಷ್ಯರು. ನಾವು ಮನುಷ್ಯರು ಪರಸ್ಪರ ಪ್ರೀತಿಯಿಂದ ಬಾಳಬೇಕು. ದ್ವೇಷ ಮನುಷ್ಯತ್ವದ ವಿರೋಧಿ. ಆದ್ದರಿಂದ ದ್ವೇಷವನ್ನು ಆಚರಿಸುವವರು ಮನುಷ್ಯತ್ವದ ವಿರೋಧಿಗಳು ಎಂದರು.

 


Post Views: 8

source

Share This Article