ತಿಮರೋಡಿ 1 ವರ್ಷ ಗಡಿಪಾರಿಗೆ ಆಕ್ಷೇಪ

Praja vahini
1 Min Read

ರಾಯಚೂರು: ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಚಿನ್ನಯ ಅವರನ್ನು ಬಂಧಿಸಿ ವಿಚಾರಣೆಯನ್ನು ನಡೆಸಲಾಗುತ್ತಿದೆ. ಧರ್ಮಸ್ಥಳ ಪ್ರಕರಣದಲ್ಲಿ ಪ್ರಮುಖ ಪಾತ್ರವಹಿಸಿದ ತಿಮರೋಡಿ ಅವರನ್ನು ಗಡಿಪಾರು ಮಾಡಲಾಗಿದ್ದು, ತಿಮರೋಡಿಯನ್ನು ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿರುವುದಕ್ಕೆ ರಾಯಚೂರು ಜಿಲ್ಲೆಯಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ.

ಮಹೇಶ್ ಶೆಟ್ಟಿ ತಿಮರೋಡಿಯನ್ನ ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ 1 ವರ್ಷ ಗಡಿಪಾರು ಮಾಡಲಾಗಿದೆ. ಆದರೆ, ತಿಮರೋಡಿಯನ್ನ ಜಿಲ್ಲೆಗೆ ಕರೆತರಬೇಡಿ‌ ಅಂತ ರಾಯಚೂರಿನಲ್ಲಿ ಪ್ರತಿಭಟನೆ ಮಾಡಲಾಗಿದೆ. ಇದನ್ನೂ ಓದಿ: ರಾಜ್ಯ ಸರ್ಕಾರದಿಂದ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ

ನಗರದ ಅಂಬೇಡ್ಕರ್ ವೃತ್ತದಲ್ಲಿ ದಲಿತ ಸೇನೆ ಹಾಗೂ ಸಮಾನ ಮನಸ್ಕರ ವೇದಿಕೆಯಿಂದ ಹೋರಾಟ ಮಾಡಲಾಯಿತು. ರಾಯಚೂರು ಜಿಲ್ಲೆಗೆ ಬೇಡ, ಯಾವುದಾದರೂ ಕಾಡಿಗೆ ಕಳುಹಿಸಿ. ಜಿಲ್ಲೆಗೆ ಕಳುಹಿಸಬೇಡಿ ಅಂತ ಹೋರಾಟಗಾರರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಧರ್ಮಸ್ಥಳದ ಬುರುಡೆ ಪ್ರಕರಣ, ಅಕ್ರಮ ಶಸ್ತ್ರಾಸ್ತ್ರ ಸಂಗ್ರಹ ಪ್ರಕರಣ ಮಾತ್ರವಲ್ಲದೆ 32 ಪ್ರಕರಣಗಳನ್ನ ಎದುರಿಸುತ್ತಿರುವ ತಿಮರೋಡಿಯನ್ನ ಮಾನ್ವಿಗೆ ಕರೆತರದಂತೆ ಒತ್ತಾಯಿಸಿದ್ದಾರೆ.


Post Views: 5

source

Share This Article