ಶೈಕ್ಷಣೀಕ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಒತ್ತು

Praja vahini
1 Min Read

ಶಹಾಪುರ: ಮತಕ್ಷೇತ್ರದಾದ್ಯಂತ ಶೈಕ್ಷಣೀಕ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗುತ್ತಿದ್ದು, ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ನೂತನ ಶಾಲಾ, ಕಾಲೇಜುಗಳ ಕೊಠಡಿಗಳ ಮಂಜೂರಿ, ಹಳೆಯ ಕಟ್ಟಡಗಳ ನೆಲಸಮಗೊಳಿಸಿ ಹೊಸ ಕಟ್ಟಡ ನಿರ್ಮಾಣಕ್ಕೆ ಆದ್ಯತೆ ನೀಡಿ ಶೈಕ್ಷಣೀಕ ಅಭಿವೃದ್ದಿಗಾಗಿ ಶ್ರಮಿಸಲಾಗುತ್ತಿದೆ ಎಂದು ಸಣ್ಣ ಕೈಗಾರಿಕೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಹೇಳಿದರು.

ನಗರದ ಸರ್ಕಾರಿ ಬಾಲಕಿಯರ ಕನ್ಯಾ ಕಾಲೇಜಿಗೆ ಬೇಟಿ ನೀಡಿ 2024-25ನೇ ಸಾಲಿನ ಕೆಕೆಆರ್‌ಡಿಬಿ (ಪಂಚಾಯತ್‌ರಾಜ್ ಇಲಾಖೆ) ಯೋಜನೆ ಯಡಿಯಲ್ಲಿ 1 ಕೋಟಿ ರೂ.ವೆಚ್ಚದ ನೂತನ 4 ಕೋಣೆ, ಒಂದು ಶೌಚಾಲಯ ಕಾಮಗಾರಿ ಪ್ರಗತಿಯಲ್ಲಿದ್ದು ಕಾಮಗಾರಿ ವಿಕ್ಷೀಸಿ ಪತ್ರಕರ್ತರೊಂದಿಗೆ ಮಾತನಾಡಿ 10 ಕೋಟಿ ರೂ.ವೆಚ್ಚದಲ್ಲಿ ಒಂದೇ ಸೂರಿನಡಿ ವಿದ್ಯಾರ್ಥಿಗಳಿಗಾಗಿ ಪ್ರಾಥಮಿಕ, ಪ್ರೌಢ ಮತ್ತು ಕಾಲೇಜು ನಿರ್ಮಾಣದ ಗುರಿ ಹೊಂದಿದ್ದು, ಶೀಘ್ರದಲ್ಲಿ ಅದೂ ಸಹ ನೇರವೆರಲಿದೆ.

ಶಿಕ್ಷಣ ಕ್ಷೇತ್ರದಲ್ಲಿ ಪ್ರಗತಿ ಸಾಧಿಸಿದಾಗ ಮಾತ್ರ ಅಭಿವೃದ್ಧಿ ಸಾಧ್ಯವೆನ್ನುವ ಉದ್ದೇಶದಿಂದ ಈಗಾಗಲೇ ಮಾದರಿ ಡಿಗ್ರಿ ಕಾಲೇಜು ನಿರ್ಮಾಣ ಸೇರಿ ಶೈಕ್ಷಣೀಕ ಕ್ಷೇತ್ರದ ಆದ್ಯತೆ ನೀಡಲಾಗುತ್ತಿದೆ. ಇದನ್ನೂ ಓದಿ: ಕುರುಬರನ್ನು ST ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡಿದ್ದು ಬೊಮ್ಮಾಯಿ ಸರ್ಕಾರ: ಸಿಎಂ

ಈಗಾಗಲೇ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಹಲವು ಹಳೆ ಕಟ್ಟಡಗಳನ್ನು ಗುರುತಿಸಿ ನೆಲ ಸಮ ಮಾಡಿ ಹೊಸ ಕಟ್ಟಡ ನಿರ್ಮಾಣಗೊಳ್ಳುತ್ತಿವೆ. ಇದರಿಂದ ಮುಂದಿನ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗಲಿದೆ. ಇದರ ಜೊತೆಗೆ ನಗರದಲ್ಲಿ ದೊರೆಯುವ ಗುಣಮಟ್ಟದ ಶಿಕ್ಷಣ ಮತ್ತು ಸೌಲಭ್ಯ ಗ್ರಾಮೀಣ ಶಾಲಾ, ಕಾಲೇಜುಗಳಲ್ಲಿ ದೊರೆಯಬೇಕು. ಮಕ್ಕಳ ಶಿಕ್ಷಣಕ್ಕಾಗಿ ಹಳ್ಳಿಯಿಂದ ನಗರಕ್ಕೆ ಬರುವುದು ತಪ್ಪಬೇಕು, ಗ್ರಾಮೀಣ ಶೈಕ್ಷಣೀಕ ವ್ಯವಸ್ಥೆಯ ಕುರಿತು ಕೀಳರಿಮೆ ಹೊಗಲಾಡಿಸಲು ಸಹ ಗ್ರಾಮೀಣ ಭಾಗದಲ್ಲಿ ಶೈಕ್ಷಣೀಕ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗುತ್ತಿದೆ. ರಾಜಕಾರಣ ಶಾಶ್ವತವಲ್ಲ ಅಭಿವೃದ್ಧಿ ಕಾರ್ಯಗಳೇ ಶಾಶ್ವತ ಹಾಗಾಗಿ ಅಭಿವೃದ್ಧಿ ಕೆಲಸಗಳಿಗೆ ಹೆಚ್ಚಿನ ಆದ್ಯತೆ ನೀಡಿ ಜನರ ಬೇಡಿಕೆಗೆ ತಕ್ಕಂತೆ ಅಭಿವೃದ್ಧಿ ಮಾಡಲಾಗುತ್ತಿದೆ ಎಂದರು.

ಈ ಸಂದರ್ಭದಲ್ಲಿ ಗುತ್ತಿಗೆದಾರರಾದ ಸಿದ್ದಣ್ಣ ಟಣಕೇದಾರ ಸೇರಿದಂತೆ ಇಲಾಖೆ ಅಧಿಕಾರಿಗಳು ಇದ್ದರು.

source

Share This Article