ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದವ್ಯಾಪ್ತಿಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿ ಸಮೀಕ್ಷೆಯನ್ನು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಸದಾಶಿವನಗರ ನಿವಾಸದಲ್ಲಿ ಸಮೀಕ್ಷೆ ಸಿಬ್ಬಂದಿಗೆ ತಮ್ಮ ಮಾಹಿತಿ ನೀಡುವ ಮೂಲಕ ಇಂದು (ಶನಿವಾರ ಅ. 04) ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಡಿಸಿಎಂ ಅವರ ಪತ್ನಿ ಉಷಾ, ರಾಜ್ಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಾರ್ಯದರ್ಶಿ ತುಳಸಿ ಮದಿನೇನಿ, ಜಿಬಿಎ ವಿಶೇಷ ಆಯುಕ್ತ ಮುನೀಶ್ ಮೌದ್ಗೀಲ್, ಡಿಸಿಎಂ ಕಾರ್ಯದರ್ಶಿ, ಬೆಂಗಳೂರು ನಗರ ಕೇಂದ್ರ ಪಾಲಿಕೆ ಆಯುಕ್ತ ರಾಜೇಂದ್ರ ಚೋಳನ್, ಬೆಂಗಳೂರು ನಗರ ಪಶ್ಚಿಮ ಪಾಲಿಕೆ ಆಯುಕ್ತ ರಾಜೇಂದ್ರನ್ ಉಪಸ್ಥಿತರಿದ್ದರು. ಇದ್ನನೂ ಓದಿ: ಎಲ್ಲಾ ಸಮಾಜದ ಮುಂದಿನ ಪೀಳಿಗೆಗೆ ನ್ಯಾಯ ಒದಗಿಸಲು ಸಮೀಕ್ಷೆಯಲ್ಲಿ ಭಾಗವಹಿಸಿ: ಡಿಕೆಶಿ

