ಹಿಂದೂಗಳೆಂದರೆ ಸಿಎಂಗೆ ಯಾಕಿಷ್ಟೊಂದು ದ್ವೇಷ?: ಆರ್. ಅಶೋಕ್

Praja vahini
1 Min Read

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಆಗಿರುವ ಸಿದ್ದರಾಮಯ್ಯನವರಿಗೆ ಹಿಂದೂ ಗಳು ಹಾಗೂ ನಮ್ಮ ಹಿಂದೂ ಜಾತಿ ಕಂಡರೆ ಯಾಕೆ ಇಷ್ಟೊಂದು ದ್ವೇಷ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಕಿರಿಕರಿದ್ದಾರೆ.

ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಹಾಕಿರುವ ಅವರು, ಹಿಂದೂಗಳ ದೇವಸ್ಥಾನ, ಹಬ್ಬ, ಆಚರಣೆಗಳಿಗೆ ಅಡಚಣೆ ಉಂಟು ಮಾಡುವುದರಲ್ಲಿ ಸಿಎಂ ಸಿದ್ದರಾಮಯ್ಯನವರು ವಿಕೃತ ಸಂತೋಷ ಪಡೆಯುತ್ತಿದ್ದಾರೆ ಎಂದು ಆರೋಪಿಸಿದರು. ಇದನ್ನೂ ಓದಿ: ಮೋದಿ ಮುಂದೆ ಮಾತನಾಡುವ ತಾಕತ್ತು ಇವರಿಗಿಲ್ಲ: ಶಿವರಾಜ ತಂಗಡಗಿ

ತಾಯಿ ಚಾಮುಂಡೇಶ್ವರಿ, ತಾಯಿ ಭುವನೇಶ್ವರಿ, ಅರಶಿಣ-ಕುಂಕುಮದ ಮೇಲೆ ನಂಬಿಕೆ ಇಲ್ಲದ ಅನ್ಯಧರ್ಮೀಯರಿಂದ ದಸರಾ ಉದ್ಘಾಟನೆ ಮಾಡಿಸುವ ಹಠ ಸಾಧಿಸಿದ್ದಾರೆ. ದುಬಾರಿ ಪಾಸ್ ನೆಪದಲ್ಲಿ ಸಾಮಾನ್ಯ ಜನರಿಗೆ ದಸರಾ ವೀಕ್ಷಣೆ ಕಷ್ಟಸಾಧ್ಯ ಮಾಡಿದರು. ಈಗ ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ರಾಜ್ಯದ 14 ಪ್ರಮುಖ ಮುಜರಾಯಿ ದೇವಸ್ಥಾನಗಳಲ್ಲಿ ಸೇವಾ ಶುಲ್ಕ ಏರಿಕೆ ಮಾಡುವ ಮೂಲಕ ಹಿಂದೂಗಳಿಗೆ ಮತ್ತೊಂದು ಪೆಟ್ಟು ನೀಡಿದ್ದಾರೆ ಎಂದು ಅಶೋಕ್ ಕಿಡಿಕಾರಿದರು.

The post ಹಿಂದೂಗಳೆಂದರೆ ಸಿಎಂಗೆ ಯಾಕಿಷ್ಟೊಂದು ದ್ವೇಷ?: ಆರ್. ಅಶೋಕ್ appeared first on .

source

Share This Article