ಹಿರಿಯ ಸಾಹಿತಿ SL ಭೈರಪ್ಪ ಇನ್ನಿಲ್ಲ

Praja vahini
1 Min Read

ಬೆಂಗಳೂರು: ವಯೋಸಹಜ ಕಾಯಿಲೆ ಬಳಲುತ್ತಿದ್ದ ಪದ್ಮಭೂಷಣ, ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ನಿಧನರಾಗಿದ್ದಾರೆ.  ಇಂದು (ಬುದವಾರ ಸೆಪ್ಟೆಂಬರ್ 24) ಬೆಂಗಳೂರಿನ ರಾಜರಾಜೇಶ್ವರಿನಗರದ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. 94 ವರ್ಷದ ಹಿರಿಯ ಸಾಹಿತಿ ಎಸ್​ ಎಲ್​ ಭೈರಪ್ಪ ಅವರು ಒಬ್ಬ ಪ್ರಸಿದ್ಧ ಕನ್ನಡ ಕಾದಂಬರಿಕಾರ, ತತ್ವಜ್ಞಾನಿ ಮತ್ತು ಲೇಖಕರಾಗಿದ್ದು, 2023ರಲ್ಲಿ ಇವರಿಗೆ ಪದ್ಮಭೂಷಣ ಪ್ರಶಸ್ತಿಗೆ ಭಾಜನರಾಗಿದ್ದರು.

ಭೈರಪ್ಪ ಅವರು ಪರ್ವ, ಆವರಣ, ಗೃಹಭಂಗ ಸೇರಿದಂತೆ ಅನೇಕ ಕಾದಂಬರಿಗಳನ್ನು ಬರೆದಿದ್ದಾರೆ. ಭೈರಪ್ಪ ಅವರು ಹಾಸನ ಜಿಲ್ಲೆಯ ಸಂತೇಶಿವಾರ ಗ್ರಾಮದವರು. ತಮ್ಮ ಸ್ವಗ್ರಾಮದ ಕೆರೆಗಳಿಗೆ ನೀರು ತುಂಬಿಸಲು ಕೂಡ ಶ್ರಮಿಸಿದ್ದರು. ಬಾಲ್ಯದಲ್ಲಿ ಕಷ್ಟದಲ್ಲೇ ಬೆಳೆದು ವಿದ್ಯಾಭ್ಯಾಸ ಮಾಡಿದ್ದರು. ಇದನ್ನೂ ಓದಿ: ಸಿಟಿ ಮಂದಿಯನ್ನ ಕೈಬೀಸಿ ಕರೆಯುತ್ತಿರುವ ದಸರಾ ಬೊಂಬೆಗಳು

ಇನ್ನು ಬೆಂಗಳೂರಿನ ರಾಜರಾಜೇಶ್ವರಿ ನಗರದ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಎಸ್​ಎಲ್ ಭೈರಪ್ಪ ಅವರು ಇಂದು ಮಧ್ಹಾಹ್ನ 2.38ಕ್ಕೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಆಸ್ಪತ್ರೆ ಅಧಿಕೃತವಾಗಿ ಪ್ರಕಟಣೆಯಲ್ಲಿ ತಿಳಿಸಿದೆ.


Post Views: 2

source

Share This Article