ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರು ನಗರದಲ್ಲಿ ಅದೆಷ್ಟೋ ರಸ್ತೆ ಕುಂಡಿಗಳಿದ್ದರೂ ಕೂಡ ಸರ್ಕಾರ ಅದರ ಬಗ್ಗೆ ಗಮನಹರಿಸದೆ ಕೇವಲ ಗ್ಯಾರಂಟಿ ಯೋಜನೆಗಳ ಬಗ್ಗೆ ಹಣ ಸುರಿತ್ತಿದೆ ಎಂದು ಈಗಾಗಲೇ ಬಿಜೆಪಿ, ಜೆಡಿಎಸ್ ಸೇರಿದಂತೆ ಸಾರ್ವಜನಿಕರು ಕೂಡ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕುತ್ತಿರುವ ಬೆನ್ನಲ್ಲೇ ಮತ್ತೆ ಇದೀಗ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆಯನ್ನು ನಡೆಸುತ್ತಿದೆ.
ಹೌದು, ಕೇವಲ ಬೆಂಗಳೂರು ನಗರ ಮಾತ್ರವಲ್ಲದೆ ರಾಜ್ಯದಲ್ಲಿ ಎಲ್ಲ ಜಿಲ್ಲೆಗಳಲ್ಲೂ ರಸ್ತೆ ಗುಂಡಿಗಳ ಸಮಸ್ಯೆ ಇದ್ದರೂ ಕೂಡ ಇದರ ಬಗ್ಗೆ ಗಮನಹರಿಸದೆ ರಾಜ್ಯ ಸರ್ಕಾರ ಕಾಲ ಹರಣ ಮಾಡುತ್ತಿದೆ ಎಂದು ಎಲ್ಲಾ ವಿಧಾನಸಭಾ ಕ್ಷೇತ್ರದಲ್ಲಿ ಒಂದು ಗಂಟೆಗಳ ಕಾಲ ರಸ್ತೆ ತೆರೆದು ಪ್ರತಿಭಟನೆ ನಡೆಸಿದೆ.
ಇನ್ನು ಬೆಂಗಳೂರು ನಗರದ ಬಸವನಗುಡಿ, ಗೋವಿಂದರಾಜನಗರ, ವಿಜಯನಗರ, ಬಿಟಿಎಂ ಲೇಔಟ್ ಕ್ಷೇತ್ರಗಳಲ್ಲಿ ರಸ್ತೆ ತಡೆ ನಡೆಸಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದ್ದಾರೆ. ಪ್ರತಿದಿನ 1 ಗಂಟೆ ರಸ್ತೆ ತಡೆ ನಡೆಸಿ ಅಥವಾ ಗುಂಡಿ ಬಿದ್ದಿರೋ ಜಾಗದಲ್ಲಿ ಕುಳಿತು ಪ್ರತಿಭಟನೆ ನಡೆಸಲು ಬಿಜೆಪಿ ನಾಯಕರು ನಿರ್ಧರಿಸಿದ್ದಾರೆ. ಇದರೊಂದಿಗೆ ತಾವೇ ಗುಂಡಿ ಮುಚ್ಚುವ ಕೆಲಸವನ್ನೂ ಮಾಡುತ್ತಿದ್ದಾರೆ.
ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದಲ್ಲಿ ರಸ್ತೆಗುಂಡಿ ಸಂಬಂಧ ಶಾಸಕ ಗೋಪಾಲಯ್ಯ ನೇತೃತ್ವದಲ್ಲಿ ಸಂಚಾರ ತಡೆ ಚಳವಳಿ ನಡೆಸಲಾಗುತ್ತಿದೆ. ರಸ್ತೆ ಗುಂಡಿಗಳ ಮುಂದೆ ಕುಳಿಯು ಬಾಯಿ ಬಾಯಿ ಬಡಿದುಕೊಳ್ಳುತ್ತಿರುವ ಪ್ರತಿಭಟನಾಕಾರರು, ತಾವೇ ಗುಂಡಿ ಮುಚ್ಚುವ ಕೆಲಸವನ್ನೂ ಮಾಡುತ್ತಿದ್ದಾರೆ.
Post Views: 3

