ಬಿಜೆಪಿ ಶಾಸಕನಿಗೆ ಶುರುವಾಯಿತು ಬಂಧನದ ಭೀತಿ!

Praja vahini
1 Min Read

ಬೆಂಗಳೂರು: ರೌಡಿಶೀಟರ್, ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯ ಶಾಸಕ ಬೈರತಿ ಬಸವರಾಜ್ ಅವರಿಗೆ ಬಂಧನದ ಭೀತಿ ಎದುರಾಗಿದೆ. ಬಿಕ್ಲು ಶಿವ ಕೇಸಿಗೆ ಸಂಬಂಧಿಸಿದಂತೆ ಈಗಾಗಲೇ ಹಲವರನ್ನು ಬಂಧಿಸಲಾಗಿದ್ದು, ಶಾಸಕ ಬೈರತಿ ಬಸವರಾಜ್ ಅವರು ಈ ಹಿಂದೆ ಆದೇಶ ತೆರವು ಮಾಡುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆ ಮಾಡಿದ್ದರು. ಈ ವಿಚಾರಣೆಗೆ ಸಂಬಂಧಿಸಿದಂತೆ ಶಾಸಕ ಬೈರತಿ ಬಸವರಾಜ್ ಅವರು ನ್ಯಾಯಾಲಯಕ್ಕೆ ಸುಳ್ಳು ಮಾಹಿತಿಗಳನ್ನು ನೀಡಿದ್ದಾರೆ ಎಂದು ತಿಳಿದುಬಂದಿದ್ದು, ಈಗ ಬೈರತಿ ಬಸವರಾಜ್ ಬಂಧಿಸಿ ವಿಚಾರಣೆಗೊಳಪಡಿಸಬೇಕಿದೆ ಎಂದು ಪ್ರಾಸಿಕ್ಯೂಷನ್ ಪರ ಎಸ್‌ಪಿಪಿ ಬಿ.ಎನ್.ಜಗದೀಶ್ ವಾದ ಮಂಡಿಸಿದ್ದಾರೆ.

ಸಿಐಡಿ ಪೊಲೀಸರ ಅರ್ಜಿಗೆ ಬೈರತಿ ಬಸವರಾಜ್ ವಕೀಲರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಪೊಲೀಸರು ಕಳೆದ ಒಂದು ತಿಂಗಳಿನಿಂದ ವಿಚಾರಣೆಗೇ ಕರೆದಿಲ್ಲ. ಈ ಹಿಂದೆ ಪೊಲೀಸರು ಕರೆದಾಗಲೆಲ್ಲಾ ವಿಚಾರಣೆಗೆ ಸಹಕರಿಸಿದ್ದಾರೆ. ಈಗ ಬಂಧನದ ಅಗತ್ಯವಿದೆ ಎಂದು ಹೇಳುತ್ತಿದ್ದಾರೆ ಎಂದು ಅರ್ಜಿಗೆ ಆಕ್ಷೇಪಣೆ ಸಲ್ಲಿಸುವುದಾಗಿ ಹಿರಿಯ ವಕೀಲ ಸಂದೇಶ್ ಚೌಟ ವಾದಿಸಿದ್ದಾರೆ. ಇದನ್ನೂ ಓದಿ: ಕ್ರಿಕೆಟ್‌ ಕೋಚ್‌ನ ಮೊಬೈಲ್‌ನಲ್ಲಿತ್ತು 2500 ಅಶ್ಲೀಲ ವಿಡಿಯೋಗಳು!

ರಾಜಕೀಯ ದೃಷ್ಟಿಯಿಂದ ಕಿರುಕುಳ ನೀಡಬಾರದು. ಎಷ್ಟು ದಿನಗಳ ಕಸ್ಟಡಿ ಬೇಕೆಂದು ಕೋರ್ಟ್ಗೆ ತಿಳಿಸಿ ಎಸ್‌ಪಿಪಿಗೆ ನ್ಯಾ. ಎಂ.ಐ.ಅರುಣ್ ಅವರಿದ್ದ ಪೀಠ ಕೇಳಿದೆ. ಅ.8 ರೊಳಗೆ ಆಕ್ಷೇಪಣೆ ಸಲ್ಲಿಸಲು ಅರ್ಜಿದಾರರಿಗೆ ಹೈಕೋರ್ಟ್ ಸೂಚನೆ ನೀಡಿದೆ.


Post Views: 16

source

Share This Article