ಸರ್ಕಾರದ ಖಜಾನೆ ಖಾಲಿ ಖಾಲಿ: ಛಲವಾದಿ ನಾರಾಯಣಸ್ವಾಮಿ

Praja vahini
1 Min Read

ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರು ನಗರದಲ್ಲಿ ರಸ್ತೆಗಳೆಲ್ಲ ಗುಂಡಿ ಬಿದ್ದಿದ್ದರೂ ಕೂಡ ರಾಜ್ಯ ಸರ್ಕಾರ ಅದನ್ನು ಮುಚ್ಚಿಸುವ ಪ್ರಯತ್ನ ಮಾಡುತ್ತಿಲ್ಲ ಎಂದು ಈಗಾಗಲೇ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಪ್ರತಿಭಟನೆ ಮಾಡುತ್ತಿದ್ದಾರೆ.

ಅಲ್ಲದೆ ರಾಜ್ಯ ಕಾಂಗ್ರೆಸ್ ಸರ್ಕಾರವು ,ರಾಜ್ಯವನ್ನು ಕಾಪಾಡಲು ಇದಿಯಾ ಅಥವಾ ರಾಜ್ಯವನ್ನು ಲೂಟಿ ಹೊಡೆಯಲು ಇದ್ಯಯಾ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಪ್ರಶ್ನಿಸಿದ್ದಾರೆ.

ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ರಸ್ತೆ ಗುಂಡಿ ಮುಚ್ಚುವ ಸ್ಥಿತಿಯಲ್ಲಿ ಇಲ್ಲ. ಏಕೆಂದರೆ ಸರ್ಕಾರದ ಖಜಾನೆ ಖಾಲಿಯಾಗಿದ್ದು, ರಸ್ತೆ ಗುಂಡಿ ಮುಚ್ಚುವುದಕ್ಕೆ ಅವರ ಬಳಿ ಹಣವಿಲ್ಲ.

ನ್ಯಾಯಾಲಯ ಆದೇಶ ನೀಡಿದ್ದರೂ ರಸ್ತೆ ಗುಂಡಿಗಳನ್ನು ಮುಚ್ಚುವ ಕೆಲಸ ಸರ್ಕಾರ ಮಾಡಲಿಲ್ಲ. ಸರ್ಕಾರಕ್ಕೆ ಎಷ್ಟು ಬಾರಿ ಹೇಳಿದರು ಕೂಡ ಬಿಜೆಪಿಯವರು ಏನಾದರು ಹೇಳಲಿ ನಾವು ಕೇರ್ ಮಾಡುವುದಿಲ್ಲ ಎಂದು ಹೇಳುತ್ತಾರೆ. ಅಂದರೆ ಬಿಜೆಪಿ ಇರುವುದೇಕೆ? ಬಿಜೆಪಿ ವಿರೋಧ ಪಕ್ಷವಾಗಿ ಕೆಲಸ ಮಾಡಬಾರದೇ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ತಿಮರೋಡಿ 1 ವರ್ಷ ಗಡಿಪಾರಿಗೆ ಆಕ್ಷೇಪ

ಇಂದು ಬೆಂಗಳೂರಿನ ಎಲ್ಲ ಉದ್ಯಮಿಗಳು ರಸ್ತೆ ಗುಂಡಿಗಳ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬೆಂಗಳೂರಿನ ಈ ಪರಿಸ್ಥಿತಿಯಿಂದ ಬೆಂಗಳೂರು ಬಿಟ್ಟು ಹೋಗಬೇಕಾಗುತ್ತದೆ ಎಂದು ಟ್ವೀಟ್ ಮಾಡುತ್ತಿದ್ದಾರೆ. ಅಂತಹ ಪರಿಸ್ಥಿತಿ ಸರ್ಕಾರಕ್ಕೆ ಇದ್ದರೆ, ಸರ್ಕಾರವು ರಸ್ತೆಗಳನ್ನು ಸರಿಪಡಿಸಿ ಅನುಕೂಲ ಮಾಡಿಕೊಡುತ್ತೇವೆ ಎಂದು ಹೇಳುವುದನ್ನು ಬಿಟ್ಟು, ಯಾರು ಬೇಕಾದರು ಹೋಗುವವರ ಹೋಗಬಹುದು ಎಂದು ಉದ್ಧಟತನದ ಹೇಳಿಕೆಯನ್ನು ನೀಡಿದ್ದಾರೆ ಎಂದು ಆಕ್ಷೇಪಿಸಿದರು.

 


Post Views: 2

source

Share This Article