ಸಿಎಂ ಸಿಟಿ ರೌಂಡ್

Praja vahini
1 Min Read


postviews: 6

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಶನಿವಾರ ಸೆಪ್ಟೆಂಬರ್ 27) ರಂದು ರಸ್ತೆ ಕಾಮಗಾರಿಗಳು ನಡೆಯುತ್ತಿರುವ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನಗರ ಹೆಣ್ಣೂರಿನ ಬಾಗಲೂರು ರಸ್ತೆಯ ವೈಟ್ ಟಾಪಿಂಗ್ ಕಾಮಗಾರಿಯನ್ನು ಪರಿಶೀಲನೆ ನಡೆಸಿ, ರಸ್ತೆಗುಂಡಿಗಳ ಸಮಸ್ಯೆ ಪರಿಹಾರಕ್ಕೆ ಸೂಚನೆ ನೀಡಿದರು.

ವೈಟ್ ಟಾಪಿಂಗ್‌ ಅಡಿ ಅಭಿವೃದ್ಧಿಪಡಿಸಲಾದ ರಸ್ತೆಗಳಲ್ಲಿ ಗುಂಡಿಗಳು ಬಿದ್ದರೆ ಅದರ ಹೊಣೆಯನ್ನು ಗುತ್ತಿಗೆದಾರರೇ ಹೊರಬೇಕಿದೆ. ಓಮ್ಮೆ ವೈಟ್ ಟಾಪಿಂಗ್ ಗೆ ರಸ್ತೆಯನ್ನು ಒಪ್ಪಿಸಿದ ಮೇಲೆ ಆ ರಸ್ತೆಗಳ ನಿರ್ವಹಣೆಗೆ ಬಿಬಿಎಂಪಿ ಹಣ ಕೊಡಲು ಬರುವುದಿಲ್ಲ. ವೈಟ್ ಟಾಪಿಂಗ್ ಕಾಮಗಾರಿ 2-3 ವರ್ಷಗಳ ಕಾಲ ನಡೆಯಲಿದೆ. ಈ ಅವಧಿಯಲ್ಲಿ ಗುತ್ತಿಗೆದಾರರೇ ರಸ್ತೆಗಳ ನಿರ್ವಹಣೆ ಮಾಡಬೇಕು ಎಂಬ ನಿಯಮವಿದೆ. ಇದನ್ನೂ ಓದಿ: ಕೈ ಸರ್ಕಾರ ಧಾರ್ಮಿಕ ಕ್ಷೇತ್ರಕ್ಕೆ ಧಕ್ಕೆ ಮಾಡುತ್ತಿದೆ: ನಿಖಿಲ್ ಕುಮಾರಸ್ವಾಮಿ

ಆದರೆ ಬಾಗಲೂರು ರಸ್ತೆಯ ಸಮರ್ಪಕ ನಿರ್ವಹಣೆ ಮಾಡದ ಹಿನ್ನೆಲೆಯಲ್ಲಿ ವೈಟ್ ಟಾಪಿಂಗ್‌ನ ಗುತ್ತಿಗೆದಾರರು ಮತ್ತು ಎಂಜಿನಿಯರ್ ಗಳ ವಿರುದ್ಧ ಸೂಕ್ತ ಕ್ರಮಕ್ಕೆ ಕೈಗೊಳ್ಳುವಂತೆ ಸೂಚಿಸಿದರು.

ಈ ಸಂದರ್ಭದಲ್ಲಿ ಸಚಿವರಾದ ಕೆಜೆ ಜಾರ್ಜ್, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಜಿಬಿಎ ಆಯುಕ್ತ ಮಹೇಶ್ವರ ರಾವ್, ತುಷಾರ್ ಗಿರಿನಾಥ್ ಮುಂತಾದವರು ಬೆಂಗಳೂರು ಸಿಟಿ ರೌಂಡ್ಸ್​ಗೆ ತೆರಳಿದ್ದಾರೆ.

source

Share This Article