ರಕ್ತದಾನ ಮತ್ತು ಉಚಿತ ಆರೋಗ್ಯ ತಪಾಸಣೆ ಶಿಬಿರ

Praja vahini
1 Min Read


postviews: 10

ಬೆಂಗಳೂರು: ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕರಾಗಿರುವಂತಹ ಎಂ ಸತೀಶ್ ರೆಡ್ಡಿ ಅವರ ನೇತೃತ್ವದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಜೀ ಅವರ ಜನ್ಮದಿನದ ಹಿನ್ನಲೆಯಲ್ಲಿ,ಇಂದು (ಸೆ. 28)  ಅರಕೆರೆಯ ಶ್ರೀ ಸಾಯಿಬಾಬಾ ಮಂದಿರದಲ್ಲಿ ರಕ್ತದಾನ ಮತ್ತು ಉಚಿತ ಆರೋಗ್ಯ ತಪಾಸಣೆ ಶಿಬಿರ ಯಶಸ್ವಿಯಾಗಿ ನೆರವೇರಿತು.

ಈ ಶಿಬಿರದಲ್ಲಿ ಅನೇಕ ನಾಗರಿಕರು ಉತ್ಸಾಹದಿಂದ ಭಾಗವಹಿಸಿದರು,ಆರೋಗ್ಯ ತಪಾಸಣೆಯಲ್ಲಿ ನ್ಯಾನೋ ಹಾಸ್ಪಿಟಲ್ಸ್ ಮತ್ತು ಟ್ರಸ್ಕ್ಯಾನ್ ಡಯಗ್ನೋಸ್ಟಿಕ್ಸ್ ಸಹಭಾಗಿಯಾಗಿ ಉತ್ತಮ ವೈದ್ಯಕೀಯ ಸೇವೆ ಒದಗಿಸಿದರು.

ಈ ಸಂದರ್ಭದಲ್ಲಿ ಬೊಮ್ಮನಹಳ್ಳಿ ಬಿಜೆಪಿ ಮಂಡಲ ಅಧ್ಯಕ್ಷರಾದ ಶ್ರೀ ಶಿವಾಜಿ. ಪಿ ರವರು ನಿಕಟಪೂರ್ವ ಬಿಬಿಎಂಪಿ ಸದಸ್ಯರಾದ ಶ್ರೀ ಪುರುಷೋತ್ತಮ ರವಿ ರವರು, ಶ್ರೀಮತಿ ಭಾಗ್ಯಲಕ್ಷ್ಮೀ ಮುರಳಿ ರವರು, ಮಾಜಿ ನಗರಸಭಾ ಸದಸ್ಯರಾದ ಶ್ರೀ ಮುರಳಿ ರವರು, ಅರಕೆರೆ ವಾರ್ಡ್ ಬಿಜೆಪಿ ಅಧ್ಯಕ್ಷರಾದ ಶ್ರೀ ಮಂಜುನಾಥ್ ರವರು,ಸ್ಥಳೀಯ ಮುಖಂಡರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

 

 

source

Share This Article