ಕಾಂಗ್ರೆಸ್ ಕಮಿಷನ್ ದಂಧೆಯಲ್ಲಿ ತೊಡಗಿದೆ: ಪ್ರಹ್ಲಾದ್ ಜೋಶಿ

Praja vahini
1 Min Read

ಹುಬ್ಬಳ್ಳಿ: ರಾಜ್ಯ ಕಾಂಗ್ರೆಸ್ ಸರಕಾರವು ಗ್ಯಾರಂಟಿ ಯೋಜನೆಗಳನ್ನು ಮುಂದಿಟ್ಟುಕೊಂಡು ಅವೈಜ್ಞಾನಿಕವಾಗಿ ಆಡಳಿತ ನಡೆಸುತ್ತಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದ್ದಾರೆ.

ನಗರದಲ್ಲಿ ಇಂದು (ಮಂಗಳವಾರ ಸೆ. 30) ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರ ನೇತೃತ್ವದಲ್ಲಿ ಅವೈಜ್ಞಾನಿಕ ಗ್ಯಾರಂಟಿಗಳನ್ನು ಮುಂದಿಟ್ಟು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಇದೀಗ ರಾಜ್ಯದ ಸಂಪತ್ತನ್ನೇ ಹಾಳು ಮಾಡಿದೆ. ಕಾಂಗ್ರೆಸ್ ಸರ್ಕಾರ ಕರ್ನಾಟಕವನ್ನು ದೋಚುತ್ತ ಅಧಃಪತನದತ್ತ ನೂಕುತ್ತಿದೆ ಎಂದು ಆರೋಪಿಸಿದ್ದಾರೆ.

ಯಾವುದೇ ಕಾಮಗಾರಿಗಳ ಬಗೆಗಿನ ಮೊತ್ತವನ್ನೂ ಗುತ್ತಿಗೆದಾರರಿಗೆ ನೀಡದೇ ಅವರ ಜೀವನವನ್ನು ಕಷ್ಟಕ್ಕೆ ತಳ್ಳಿದೆ. ಅಭಿವೃದ್ಧಿ ಕಾಮಗಾರಿಗಳು ನಡೆದು ವರ್ಷಗಳೇ ಕಳೆದರೂ ಹಣ ನೀಡದೇ ಸತಾಯಿಸುತ್ತಿದೆ. ಕಮಿಷನ್ ದಂಧೆಯಲ್ಲಿ ತೊಡಗಿ ವ್ಯಾಪಕ ಭ್ರಷ್ಟಾಚಾರದಲ್ಲಿ ಮುಳುಗಿದೆ. ಇದರ ವಿರುದ್ಧ ಗುತ್ತಿಗೆದಾರರು ಆಕ್ರೋಶ ವ್ಯಕ್ತಪಡಿಸಿ ಸಿಎಂಗೆ ಪತ್ರ ಬರೆದರೂ ಕಿಮ್ಮತ್ತಿಲ್ಲದಂತಾಗಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ನವರಿಗೆ ಬದ್ಧತೆ ಇಲ್ಲ: ಸಿ.ಟಿ ರವಿ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ದುರಾಡಳಿತ ನಡೆಸುತ್ತಿದೆ. ಒಂದೆಡೆ ಬೆಲೆ ಏರಿಕೆಯ ಬರೆ ಎಳೆದು ಜನರ ಜೀವನದ ಜೊತೆ ಚೆಲ್ಲಾಟವಾಡುತ್ತಿದ್ದು, ಮತ್ತೊಂದೆಡೆ ಗ್ಯಾರೆಂಟಿಗಳ ನೆಪದಲ್ಲಿ ರಾಜ್ಯದ ಅಭಿವೃದ್ಧಿಯನ್ನು ಸಂಪೂರ್ಣ ಕಡೆಗಣಿಸಿದೆ. ಅಲ್ಲದೇ ವರ್ಗಾವಣೆಯನ್ನು ಒಂದು ದಂಧೆಯನ್ನಾಗಿ ಮಾಡಿಕೊಂಡಿದೆ ಎಂದು ದೂರಿದ್ದಾರೆ.

The post ಕಾಂಗ್ರೆಸ್ ಕಮಿಷನ್ ದಂಧೆಯಲ್ಲಿ ತೊಡಗಿದೆ: ಪ್ರಹ್ಲಾದ್ ಜೋಶಿ appeared first on .

source

Share This Article