ತಿಮರೋಡಿಗೆ ತಾತ್ಕಾಲಿಕ ರಿಲೀಫ್‌

Praja vahini
1 Min Read

ಬೆಂಗಳೂರು: ಮಹೇಶ್ ಶೆಟ್ಟಿ ತಿಮರೋಡಿಗೆ ಬಿಗ್‌ ರಿಲೀಫ್‌ ಸಿಕ್ಕಿದೆ. ದಕ್ಷಿಣ ಕನ್ನಡದಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿಗೆ ಗಡಿಪಾರು ಮಾಡುವ ಉಪವಿಭಾಗಾಧಿಕಾರಿಯ ಆದೇಶದ ವಿರುದ್ಧ ಅವರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಅ. 8 ರವರೆಗೆ ಗಡೀಪಾರು ಆದೇಶ ಜಾರಿಗೊಳಿಸದಂತೆ ಮಧ್ಯಂತರ ತಡೆಯಾಜ್ಞೆ ನೀಡಿದೆ. ಗಡಿಪಾರು ಆದೇಶಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿ ಹೈಕೋರ್ಟ್‌ ಪ್ರತಿವಾದಿಗಳಿಗೆ ನೋಟೀಸ್ ನೀಡಿದೆ. ನೋಟಿಸ್ ಜಾರಿ ಮಾಡಿ ಅ.8‌ ಕ್ಕೆ ವಿಚಾರಣೆ ಮುಂದೂಡಿದೆ.

ಇನ್ನು ಗಡಿಪಾರು ಆದೇಶ ರದ್ದು ಕೋರಿ ಕರ್ನಾಟಕ ಹೈಕೋರ್ಟ್‌ಗೆ ತಿಮರೋಡಿ ಅರ್ಜಿ ಸಲ್ಲಿಸಿದ್ದರು. ನ್ಯಾ. ಸಿ.ಎಂ.ಪೂನಚ್ಚ ಅವರ ಏಕಸದಸ್ಯ ಪೀಠವು ಅರ್ಜಿ ವಿಚಾರಣೆ ನಡೆಸಿ ಆದೇಶ ಹೊರಡಿಸಿದೆ. ಇದನ್ನೂ ಓದಿ: ಕಾಂಗ್ರೆಸ್ ಕಮಿಷನ್ ದಂಧೆಯಲ್ಲಿ ತೊಡಗಿದೆ: ಪ್ರಹ್ಲಾದ್ ಜೋಶಿ

ತಕ್ಷಣ ಗಡಿಪಾರು ಆದೇಶಕ್ಕೆ ಮಧ್ಯಂತರ ತಡೆ ನೀಡಿ ರದ್ದು ಪಡಿಸಲು ಅರ್ಜಿ ಸಲ್ಲಿಸಿದ್ದರು. ಸೆ.18 ರಂದು ತಿಮರೋಡಿಯನ್ನು ರಾಯಚೂರಿಗೆ ಗಡಿಪಾರು ಪುತ್ತೂರು ಎಸಿ ಸ್ಟೆಲ್ಲಾ ವರ್ಗೀಸ್ ಆದೇಶಿಸಿದ್ದರು. 2025 ರ ಸೆ.18 ರಿಂದ 2026ರ ಸೆ.17 ರ ವರೆಗೆ ಒಂದು ವರ್ಷದ ಅವಧಿಗೆ ಗಡಿಪಾರು ಮಾಡಿ ಆದೇಶಿಸಿದ್ದರು.

The post ತಿಮರೋಡಿಗೆ ತಾತ್ಕಾಲಿಕ ರಿಲೀಫ್‌ appeared first on .

source

Share This Article