postviews: 19
ಮಂಡ್ಯ: ರಾಜ್ಯ ರಾಜಕೀಯದಲ್ಲಿ ಸಿಎಂ ಬದಲಾವಣೆ ಕೂಗು ಕಳೆದ ಹಲವಾರು ದಿನಗಳಿಂದ ಕೇಳುತ್ತಿದ್ದು ಮತ್ತೆ ಇದೀಗ ಬಿಗ್ ಟ್ರಸ್ಟ್ ಸಿಕ್ಕಿದೆ. ಇದೇ ನವಂಬರ್ ತಿಂಗಳಲ್ಲಿ ಡಿಕೆ ಶಿವಕುಮಾರ್ ಅವರು ಸಿಎಂ ಪಟ್ಟ ಅಲಂಕರಿಸಲಿದ್ದಾರೆ ಎಂದು ಮಾಜಿ ಸಂಸದ ಎಲ್ ಆರ್ ಶಿವರಾಮೇಗೌಡ ಅವರು ಹೇಳಿದ್ದಾರೆ.
ನಗರದಲ್ಲಿ ಇಂದು (ಬುಧವಾರ ಅ. 01) ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಇದೇ ನವಂಬರ್ ತಿಂಗಳಲ್ಲಿ ಎಲ್ಲದಕ್ಕೂ ಕಾಂಗ್ರೆಸ್ ಹೈಕಮಾಂಡ್ ತೀರ್ಮಾನ ನೀಡಲಿದೆ. ಕಾಂಗ್ರೆಸ್ ಹೈಕಮಾಂಡ್ ಗೆ ಯಾವ ನಿರ್ಧಾರ ತೆಗೆದುಕೊಳ್ಳಬೇಕೆಂದು ಗೊತ್ತಿದೆ. ಹಾಗಾಗಿ ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಬೇಕು ಅಥವಾ ಆಗಬಾರದು ಎಂಬುದನ್ನು ಕಾಂಗ್ರೆಸ್ ಹೈಕಮಾಂಡ್ ತೀರ್ಮಾನಿಸಲಿದೆ ಎಂದರು. ಇದನ್ನೂ ಓದಿ: ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆಗೆ ದಾಖಲು
ನಾವೆಲ್ಲರೂ ಅಂದುಕೊಂಡಿದ್ದೇವೆ ಡಿಕೆ ಶಿವಕುಮಾರ್ ಅವರು ಸಿಎಂ ಆಗಬೇಕು ಅಂತ. 100ಕ್ಕೆ 100% ಇದೇ ನವಂಬರ್ ನಲ್ಲಿ ಡಿಕೆ ಶಿವಕುಮಾರ್ ಅವರು ಸಿಎಂ ಆಗಲಿ ಎಂದು ನಾವೆಲ್ಲರೂ ಅಂದುಕೊಂಡಿದ್ದೇವೆ ಎಂದು ಹೇಳಿದ್ದಾರೆ. ಯಾವುದೇ ರೀತಿ ಅನುಮಾನವಿಲ್ಲದೆ ನವಂಬರ್ ನಲ್ಲಿ ಡಿಕೆ ಶಿವಕುಮಾರ್ ಅವರು ಸಿಎಂ ಆಗೇ ಆಗುತ್ತಾರೆ ಎಂದು ಹೇಳಿದ್ದಾರೆ. ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾದರೆ ನಮಗೆಲ್ಲರಿಗೂ ತೃಪ್ತಿ ಎಂದು ಹೇಳಿದ್ದಾರೆ.

