ಬೆಂಗಳೂರು ಕೇಂದ್ರ ನಗರ ಪಾಲಿಕೆಯಲ್ಲಿ ಗಾಂಧೀ ಜಯಂತಿ ಆಚರಣೆ

Praja vahini
1 Min Read


postviews: 9

ಬೆಂಗಳೂರು: ಬೆಂಗಳೂರು ಕೇಂದ್ರ ನಗರ ಪಾಲಿಕೆ ವತಿಯಿಂದ ಇಂದು (ಗುರುವಾರ ಅ. 02) ನಗರದ ಎಂ. ಜಿ. ರಸ್ತೆಯಲ್ಲಿರುವ ಮಹಾತ್ಮ ಗಾಂಧೀಜಿ ಉದ್ಯಾನವನದಲ್ಲಿರುವ ಗಾಂಧೀಜಿಯವರ ಪ್ರತಿಮೆಗೆ ಮಾಲಾರ್ಪಣೆ, ಪುಷ್ಪನಮನ ಸಲ್ಲಿಕೆ ಹಾಗೂ ಸರ್ವಧರ್ಮ ಪ್ರಾರ್ಥನೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ಜಿಬಿಎ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ರವರು, ಅಭಿವೃದ್ಧಿ ಅಪರ ಆಯುಕ್ತರಾದ ದಲ್ಜಿತ್ ಕುಮಾರ್ ರವರು, ಮಾಜಿ ಸಚಿವರಾದ ರಾಮಚಂದ್ರಗೌಡರವರು, ಮಾಜಿ ಮಹಾಪೌರರುಗಳಾದ ಜಿ.ಹುಚ್ಚಪ್ಪ, ಎಂ.ರಾಮಚಂದ್ರಪ್ಪ ರವರು, ಜಂಟಿ ಆಯುಕ್ತರಾದ ರಂಗನಾಥ್ ರವರು ಮಹಾತ್ಮ ಗಾಂಧೀಜಿ ಯವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪುಷ್ಪನಮನ ಸಲ್ಲಿಸಿದರು. ಇದನ್ನೂ ಓದಿ: ಗಾಂಧಿ ಭವನ ಉದ್ಘಾಟಿಸಿದ ಜಿಲ್ಲಾ ಉಸ್ತುವಾರಿ ಸಚಿವ: ಮುನಿಯಪ್ಪ

ಈ ಸಂದರ್ಭದಲ್ಲಿ ಮುಖ್ಯ ಅಭಿಯಂತರರಾದ ಸುಗುಣ, ಕಂದಾಯ ವಿಭಾಗದ ಉಪ ಆಯುಕ್ತರು, ಕಾರ್ಯಪಾಲಕ ಅಭಿಯಂತರರು  ಸೇರಿಂದತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

source

Share This Article