ಬೆಂಗಳೂರು: ಕನ್ನಡ ಚಿತ್ರರಂಗದ ಬಹುನಿರೀಕ್ಷಿತ ಸಿನಿಮಾ ಕಾಂತಾರ ಚಾಪ್ಟರ್ 1 ವಿಶ್ವದಾದ್ಯಂತ ಈಗಾಗಲೇ ಭರ್ಜರಿ ಪ್ರದರ್ಶನ ಕಾಣುತ್ತಿದ್ದು, ಚಿತ್ರ ವೀಕ್ಷಣೆಗೆ ಟಿಕೆಟ್ ಸಿಗದೇ ಅಭಿಮಾನಿಗಳು ಪರದಾಡುತ್ತಿದ್ದಾರೆ.
ಹೌದು, ರಿಷಬ್ ಶೆಟ್ಟಿ ನಟನೆಯ ಕಾಂತಾರ ಚಾಪ್ಟರ್ 1 ರಿಲೀಸ್ ಆಗಿದ್ದು, ಪ್ರೇಕ್ಷಕರಿಂದ ಭರ್ಜರಿ ರೆಸ್ಪಾನ್ಸ್ ದೊರೆತಿದೆ.
ಇನ್ನು ಕಾಂತಾರ ಚಾಪ್ಟರ್ 1 ಸಿನಿಮಾ ನೋಡಲು ಹಾಸನ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಸಿನಿಮಾ ವೀಕ್ಷಣೆಗೆ ಇಡೀ ಥಿಯೇಟರ್ ಬುಕ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ದಾಖಲೆ ಬರೆದ ಕಾಂತಾರ ಚಾಪ್ಟರ್ 1

