ಬಸವ ಸಂಸ್ಕೃತಿ ಅಭಿಯಾನ

Praja vahini
1 Min Read

ಬೆಂಗಳೂರು: ವಿಶ್ವಗುರು ಬಸವಣ್ಣ ಅವರನ್ನು “ಕರ್ನಾಟಕ ಸಾಂಸ್ಕೃತಿಕ ನಾಯಕ” ಎಂದು ಘೋಷಿಸಿದ ವರ್ಷಾಚರಣೆ ಸಂದರ್ಭದಲ್ಲಿ ಆಯೋಜಿಸಲಾಗಿದ್ದ ‘ಬಸವ ಸಂಸ್ಕೃತಿ ಅಭಿಯಾನ-2025’ ರ ಸಮಾರೋಪ ಸಮಾರಂಭದಲ್ಲಿ ಶರಣ ಸಂಸ್ಕೃತಿಯ 301 ಶರಣರು, ಗುರುಗಳು, ಸ್ವಾಮೀಜಿಗಳ ಸಾನಿದ್ಯದಲ್ಲಿ ಸಮುದಾಯದ ಸುಮಾರು 2 ಲಕ್ಷಕ್ಕೂ ಅಧಿಕ ಮಂದಿಯ ಸಮ್ಮುಖದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸನ್ಮಾನಿಸಲಾಯಿತು.

ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಬೃಹತ್ ಕಾರ್ಯಕ್ರಮದಲ್ಲಿ ಲಿಂಗಾಯತ ಧರ್ಮ ಚಳವಳಿಯ ಪ್ರಮುಖರು, ಪ್ರಗತಿಪರ ಚಿಂತಕರು, ಹೋರಾಟಗಾರರು ಉಪಸ್ಥಿತರಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಶರಣ ಸಂಸ್ಕೃತಿ ಬಗೆಗಿನ ಬದ್ಧತೆಯನ್ನು ಶ್ಲಾಘಿಸಿ ಅಭಿನಂದಿಸಿದರು. ಇದನ್ನೂ ಓದಿ: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ ಖೈದಿಗಳಿಗೆ ರಾಜಾತಿಥ್ಯ

source

Share This Article