ಕಾಂತಾರ ಚಾಪ್ಟರ್ 1 ಸಿನಿಮಾ ವೀಕ್ಷಣೆ ಮಾಡಿದ ಮುರ್ಮು

Praja vahini
1 Min Read

ದೆಹಲಿ: ಅಕ್ಟೋಬರ್ 2ರಂದು ವಿಶ್ವದಾದ್ಯಂತ ಬಿಡುಗಡೆ ಹೊಂದಿರುವ ಕಾಂತಾರ ಚಾಪ್ಟರ್ 1 ಸಿನಿಮಾ ಎಲ್ಲೆಡೆ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಅಲ್ಲದೆ ರಾಷ್ಟ್ರಪತಿ ಭವನದಲ್ಲೂ ಕೂಡ ಕಾಂತಾರ ಸಿನಿಮಾ ಪ್ರಸಾರವಾಗಿದೆ.

ಹೌದು, ಕಾಂತಾರ ಸಿನಿಮಾ ಬಿಡುಗಡೆಯಾದ ಮೂರ್ನಾಲ್ಕು ದಿನಗಳಲ್ಲಿ ವಿಶ್ವದಾದ್ಯಂತ ಭರ್ಜರಿ ಮೆಚ್ಚುಗೆ ಪಡೆಯುತ್ತಿದ್ದು, ಇದೀಗ ಕಾಂತರಾ ಚಾಪ್ಟರ್ 1 ಸಿನಿಮಾವನ್ನು ರಾಷ್ಟ್ರಪತಿ, ದ್ರೌಪದಿ ಮುರ್ಮು ಅವರು ಸಿನಿಮಾವನ್ನು ವೀಕ್ಷಣೆ ಮಾಡಿದ್ದಾರೆ.

ರಿಷಬ್‌ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ಕಾಂತಾರ ಚಾಪ್ಟರ್‌ 1 ಸಿನಿಮಾ ವಿಶ್ವದಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿದೆ. ರಾಷ್ಟ್ರಪತಿ ಭವನದಲ್ಲಿ (ಭಾನುವಾರ ಅ.05) ದ್ರೌಪದಿ ಮುರ್ಮು  ಅವರು ಸಿನಿಮಾ ವೀಕ್ಷಿಸಲಿದ್ದಾರೆ. ಇದನ್ನೂ ಓದಿ: ದಾಖಲೆ ಬರೆದ ಕಾಂತಾರ ಚಾಪ್ಟರ್ 1

ಇನ್ನು ನಟ, ನಿರ್ದೇಶಕ ರಿಷಬ್‌ ಶೆಟ್ಟಿ, ನಟಿ ರುಕ್ಮಿಣಿ ವಸಂತ್‌, ನಿರ್ಮಾಪಕ ಚಲುವೆ ಗೌಡ ಸಮ್ಮುಖದಲ್ಲಿ ಸಿನಿಮಾ ಪ್ರದರ್ಶನ ಮಾಡಲಾಗಿದೆ. ಬಳಿಕ ಚಿತ್ರತಂಡವನ್ನು ರಾಷ್ಟ್ರಪತಿಗಳು ಗೌರವಿಸಿದರು.

 

source

Share This Article